ತುಮಕೂರು : ಆಧುನಿಕ ಜೀವನ ಶೈಲಿಯಲ್ಲಿ ಯೋಗ ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುμï ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಪೆÇಲೀಸ್ ಕವಾಯತ್ ಮೈದಾನದಲ್ಲಿ ಆಯೋಜಿಸಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ದೇಹ ಹಾಗೂ ಸ್ವಾಸ್ಥ್ಯ ಮನಸ್ಸಿಗಾಗಿ ಯೋಗಾಭ್ಯಾಸ ಉತ್ತಮ ಸಾಧನ. ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗ ಅಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆಯಲ್ಲದೆ, ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ರೋಗಗಳ ನಿಯಂತ್ರಣದಲ್ಲಿ ಹೆಚ್ಚು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಭಾರತದಲ್ಲಿ ಸಾವಿರಾರು ವರ್ಷಗಳಿಂದ ಯೋಗದ ಪರಂಪರೆ ಮುಂದುವರೆದುಕೊಂಡು ಬಂದಿದ್ದು, ಈ ಪರಂಪರೆಯ ಮಹತ್ವವನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯು ಪ್ರತಿ ವರ್ಷ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಚಂದ್ರಶೇಖರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಚಂದ್ರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಅಸ್ಗರ್ ಬೇಗ್, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಆಯುμï ಅಧಿಕಾರಿ ಡಾ. ಗಂಗಾಧರ್ ಸಿ, ಡಿಡಿಪಿಐ ಮನಮೋಹನ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಪರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ವಿದ್ಯಾರ್ಥಿಗಳ ಜೊತೆ ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು.